ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ…
Tag: dk shivakumar
ಡಿಕೆ ಬ್ರದರ್ಸ್’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳ ದಾಖಲೆ ಬಹಿರಂಗ
ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ ರಾಮನಗರ: ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 2004ರಲ್ಲಿ ಡಿ.ಕೆ.ಶಿವಕುಮಾರ್ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳು, ಡಿಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆಗಳನ್ನು ಬಹಿರಂಗ…