ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.…

ಡಿಕೆ ಬ್ರದರ್ಸ್‌’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ

ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್‌ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ ರಾಮನಗರ: ನೈಸ್‌ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 2004ರಲ್ಲಿ ಡಿ.ಕೆ.ಶಿವಕುಮಾರ್‌ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್‌ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳು, ಡಿಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು ಬಹಿರಂಗ…