ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸ ಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…