ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಗರಸಭೆ ಮತ್ತು ನಗರ ಠಾಣಾ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು, ರಸ್ತೆ ಬದಿಯ ಅಂಗಡಿಗಳನ್ನು ತೆರವು ಮಾಡಿದ್ದಾರೆ. ದೊಡ್ಡಬಳ್ಳಾಪುರ ಜಿ.ರಾಮೇಗೌಡ ವೃತ್ತದ ಬಳಿ ನಗರಸಭೆಯ ಪರಿಸರ ವಿಭಾಗದ ಎಇಇ ಈರಣ್ಣ, ನಗರ ಠಾಣಾ ಇನ್ಸ್ಪೆಕ್ಟರ್ ಎ.ಅಮರೇಶ್ ಗೌಡ ನೇತೃತ್ವದಲ್ಲಿ ಬುಧವಾರ ಬೀದಿಬದಿ ಅಂಗಡಿಗಳ ತೆರವು ಮಾಡಲಾಯಿತು. ಹೈಕೋರ್ಟ್ ಆದೇಶದಂತೆ ರಸ್ತೆ ಬದಿಗಳಲ್ಲಿನ ಅನಧಿಕೃತ ಅಂಗಡಿಗಳನ್ನು ಕಡ್ಡಾಯವಾಗಿ ತೆರವು ಮಾಡಲಾಗುತ್ತಿದೆ. ಎರಡು ತಿಂಗಳ ಹಿಂದೆಯೂ ತೆರವು ಕಾರ್ಯಾಚರಣೆ ಮಾಡಿದ್ದೇವು. ಬೀದಿಬದಿ ವ್ಯಾಪಾರಿಗಳಿಗೆ ಈ ವೇಳೆ ಪರ್ಯಾಯ ವ್ಯವಸ್ಥೆಯ ಬಗ್ಗೆಯೂ ಮನವರಿಕೆ ಮಾಡಲಾಗಿತ್ತು. ಇದೀಗ ಪರ್ಯಾಯ ಸ್ಥಳವನ್ನು ವಿನಾಯಕನಗರ, ಬಸವಣ್ಣ ದೇಗುಲ ಬಳಿ ಸ್ಥಳವನ್ನು ಗುರುತಿಸಿ ನೀಡಿದ್ದೇವೆ ಎಂದು ನಗರಸಭೆ ಪರಿಸರ ವಿಭಾಗದ ಎಇಇ ಈರಣ್ಣ ತಿಳಿಸಿದ್ದಾರೆ. ವಿನಾಯಕನಗರದಲ್ಲಿ ಪರ್ಯಾಯ ವ್ಯವಸ್ಥೆ: ಬೀದಿ ಬದಿಯಲ್ಲಿನ ವ್ಯಾಪಾರಿಗಳನ್ನು ಏಕಾಏಕಿ ತೆರವು ಕಾರ್ಯಾಚರಣೆಯಿಂದಾಗಿ ವ್ಯಾಪಾರಿಗಳು ಅತಂತ್ರರಾಗಿದ್ದಾರೆ…