ರಸ್ತೆ, ಚರಂಡಿ, ಕಸ ಸಮಸ್ಯೆಗೆ ಸಿಗದ ಮುಕ್ತಿ; ಅಧಿಕಾರಿಗಳೊಂದಿಗೆ ಸಾರ್ವಜನಿಕರ ವಾಗ್ವಾದ.. ‘ಕೈ’ ಸದಸ್ಯರಿಂದ ಬಹಿಷ್ಕಾರ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳ ಅಗಲೀಕರಣ, ಕಸದ ಸಮಸ್ಯೆ, ರಸ್ತೆಗಳಲ್ಲಿನ ಗುಂಡಿ, ಒಳಚರಂಡಿ, ಖಾತೆಗಳ ಸಮಸ್ಯೆಗಳಿಗೆ ಶೀಘ್ರವಾಗಿ ಮುಕ್ತಿ ನೀಡಿ ಎಂದು ಶಾಸಕ ಧೀರಜ್ ಮುನಿರಾಜುಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ನಗರಸಭೆ ಆವರಣದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಾರ್ವಜನಿಕರು ನಗರದಲ್ಲಿನ ರಸ್ತೆಗಳು ಅಭಿವೃದ್ಧಿಯಾಗದೆ, ಗುಂಡಿಗಳೆ ತುಂಬಿವೆ. ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಕಳೆದ 50 ವರ್ಷಗಳಿಂದ ಇದ್ದ ರಸ್ತೆಗಳೇ ಇಂದು ಇವೆ. ನಗರಕ್ಕೆ ತಕ್ಕಂತೆ ಒಂದೇ ಒಂದು ರಸ್ತೆಗಳು ಅಗಲೀಕರಣ ಆಗಿಲ್ಲ. ಪ್ರಮುಖ ವಾರ್ಡ್ ಗಳಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಬೀದಿ ದೀಪಗಳು ಇಲ್ಲವಾಗಿದೆ. ಒಂದನೇ ವಾರ್ಡ್ ರಾಜೀವ್ ಗಾಂಧಿ ಕಾಲೋನಿ ಕನಿಷ್ಟ ಮೂಲಭೂತ ಸೌಕರ್ಯಗಳು ಇಲ್ಲದಾಗಿದೆ ಎಂದು ಅಳಲು ತೋಡಿಕೊಂಡರು. ರೆವೆನ್ಯೂ ಸೈಟ್ ಗಳಿಗೆ ನಗರಸಭೆಯಿಂದ ಖಾತೆ ನೀಡಲು ಬರುವುದಿಲ್ಲ. ಖಾತೆ ಇಲ್ಲದ ಸೈಟ್ ಗಳಲ್ಲಿ ಮನೆಗಳ…