ದೊಡ್ಡಬಳ್ಳಾಪುರ: ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ದೃಷ್ಟಿಯಿಂದ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ತಾಲ್ಲೂಕಿನ ಕಣಿವೆಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 10 ಜನ ಸದಸ್ಯರಿಗೆ ಹೈನುಗಾರಿಕೆಗೆ ಉತ್ತೇಜನ ನೀಡಲು ಸಾಲದ ರೂಪದಲ್ಲಿ ಬಡ್ಡಿ ರಹಿತವಾಗಿ ತಲಾ ರೂ.25,000 ರೂಗಳ ಚೆಕ್ ಗಳನ್ನು ಕ್ಷೀರ ಸಂಜೀವಿನಿ ಯೋಜನೆಯಡಿ ವಿತರಣೆ ಮಾಡಲಾಗುತ್ತಿದೆ ಎಂದು ಬಮೂಲ್ ನಿರ್ದೆಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಕಣಿವೆಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು ಹೈನುಗಾರಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕ್ಷೀರ ಸಂಜೀವಿನಿ ಯೋಜನೆಯಡಿ ಈ ಸಾಲವನ್ನು ಒಂದು ವರ್ಷದ ಅವಧಿಯವರೆಗೆ ಬಡ್ಡಿ ರಹಿತವಾಗಿ ನೀಡಲಾಗುತ್ತದೆ. ಸಾಲ ಪಡೆದ ಫಲಾನುಭವಿಯು ತಾವು ಸಾಲ ಪಡೆದ ಸಂಘಕ್ಕೆ ಹಾಲು ಪೂರೈಸುವ ಮೂಲಕ ಪ್ರತೀ ತಿಂಗಳು ಎರಡು ಸಾವಿರದಂತೆ ಸಂಘದ ಮೂಲಕ ಒಕ್ಕೂಟಕ್ಕೆ ಮರುಪಾವತಿ ಮಾಡಬೇಕಾಗಿದ್ದು,…