ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗುರುವಾರ ಚುನಾವಣೆ ನಡೆಯಿತು. ಒಟ್ಟು 11 ನಿರ್ದೆಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ನಿರ್ದೇಶಕರಾಗಿ ಲಕ್ಷ್ಮಮ್ಮ, ಮೀನಾಕ್ಷಿ, ಶ್ರೀನಿವಾಸ, ಲಿಂಗಮೂರ್ತಿ, ನಂಜೇಗೌಡ, ಹನುಮಂತಪ್ಪ, ಶಿವಕುಮಾರ್, ಶಶಿಕುಮಾರ್, ಶಂಕರಪ್ಪ, ಸುರೇಶ್, ಆನಂದ್ ಅವರುಗಳು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರಿ ಇಲಾಖೆಯ ಮಾಧವರೆಡ್ಡಿ ಕರ್ತವ್ಯ ನಿರ್ವಹಿಸಿದರು. ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದ ಮಾಧವರೆಡ್ಡಿ ಸೊಣ್ಣಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿನ ಸದಸ್ಯರು ಕರ್ನಾಟಕ ಹಾಲು ಮಹಾಮಂಡಳ ಹಾಗೂ ಬೆಂಗಳೂರು ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಒಕ್ಕೂಟದಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ರಾಸುಗಳ ವಿಮಾ ಸೌಲಭ್ಯ, ಬಮೂಲ್ ವಿಮಾ ಸೌಲಭ್ಯ, ಸಂಘದ ಕಟ್ಟಡ ಕಟ್ಟಲು…