ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ದಾರಿ ಉದ್ದಕ್ಕೂ ಅನೇಕ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಹಿಂದಕ್ಕೆ ಹೋಗಿದೆ ಪ್ರಾದೇಶಿಕ ಪಕ್ಷ ಜೆಡಿಎಸ್ ಮುಂದಕ್ಕೆ ಬಂದಿದೆ. ಮೈಸೂರ್ ಚಲೋ ಪಾದಯಾತ್ರೆ ಮಾಡಬಾರದು ಎಂದು ರಾಜಾರೋಷವಾಗಿ ಹೇಳಿದವರ ಫೋಟೋ ಈಗ ಮುಂದೆ ಬಂದಿದೆ. ಪಾದಯಾತ್ರೆ ಮಾಡಲೇಬೇಕು ಎಂದು ಘಂಟಾಘೋಷವಾಗಿ ಹೇಳಿದ ಬಿಜೆಪಿಯ ರಾಜ್ಯ ಅಧ್ಯಕ್ಷರ ಫೋಟೋ ಹಿಂದಕ್ಕೆ ಹೋಗಿದೆ ಎಂದು ಟೀಕಿಸಿದರು. ಭ್ರಷ್ಟಾಚಾರಿಗಳ ಭ್ರಷ್ಟಾಚಾರದ ಯಾತ್ರೆ ಎಂದು ಬಿಜೆಪಿಯವರೇ ಹೇಳಿದ್ದಾರೆ. ಸತ್ಯವನ್ನು ಮರೆಮಾಚಲು ಎರಡು ಪಕ್ಷಗಳು ಹೊರಟಿವೆ. ನಾಲ್ಕು ವರ್ಷ ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ನಡೆಸಿ, 40% ಕಮಿಷನ್…
Tag: Dr.G.Parameshwar
ಮುಡಾ ಹಗರಣ; ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ
ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದವರು ತಿಳಿಸಿದರು.