ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. “ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿಶೀಲಿಸಲು…

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ. ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು. ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ…