ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರಿಗೆ ಸೇರಿದ್ದೆನ್ನಲಾದ ಚಿನ್ನಾಭರಣ, ನಗದು ಸಹಿತ ಆಸ್ತಿ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಬಂಡೆಪಾಳ್ಯದಲ್ಲಿ ದಾಖಲಾಗಿರುವ ಈ ಪ್ರಕರಣ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಸರಣಿ ಕಾರ್ಯಾಚರಣೆ ಸಾಗಿದೆ. ಇದೇ ಸಂದರ್ಭದಲ್ಲಿ ಸರ್ಚ್ ವಾರೆಂಟ್ ಪಡೆದು ಅಖಾಡಕ್ಕೆ ಧುಮುಕಿರುವ ರೀನಾ ಸುವರ್ಣ ನೇತೃತ್ವದ ಸಿಸಿಬಿ ತಂಡ ಕರಾವಳಿಜಿಲ್ಲೆಯಲ್ಲಿ ನಡೆಸಿರುವ ಕಾರ್ಯಾಚರಣೆ ಕುತೂಹಲದ ಕೇಂದ್ರಬಿಂದುವಾಯಿತು. 3.5 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಗ್ಯಾಂಗ್ ಆ ಹಣವನ್ನು ಎಲ್ಲಿ ಇಟ್ಟಿದೆ ಎಂಬ ಬಗ್ಗೆ ಶೋಧನೆಗಿಳಿದಿರುವ ಈ ಪೊಲೀಸರು, ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿಗೆ ತೆರಳಿ ತನಿಖೆ ಕೈಗೊಂಡಿದೆ. ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಮಾಡಿದೆ.…