ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…
Tag: Former MLC Rameah Babu
BJP-JDS ಮೈತ್ರಿಯ ಪ್ರತಿಧ್ವನಿ; ಸಿ.ಎಂ.ಇಬ್ರಾಹಿಂಗೆ ಆಹ್ವಾನ ನೀಡಿದ ಕಾಂಗ್ರೆಸ್
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ತುಳಿಯುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ಕೆಪಿಸಿಸಿ ವಕ್ತಾರರೂ ಆದ ಮಾಜಿ ಶಾಸಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಬಳಸಿಕೊಳ್ಳಲಾಗುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಹಳೇ ಮೈಸೂರು ಭಾಗದಲ್ಲಿ ಕುಮಾರಸ್ವಾಮಿ ಅವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಅವರನ್ನು ಬೈಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ರಮೇಶ್ ಬಾಬು, ಕೇರಳದ ಜೆಡಿಎಸ್ ಶಾಸಕರು ದೇವೆಗೌಡರ ವಿರುದ್ದ ದನಿ ಎತ್ತಿ, ನಾವು ಪ್ರತ್ಯೇಕವಾಗಿ ಉಳಿಯುತ್ತೇವೆ ಎಂದು ಹೇಳಿದ್ದಾರೆ. ಜೆಡಿಎಸ್ ಪ್ರಾದೇಶಿಕ ಪಕ್ಷವಲ್ಲ, ಅದರ ರಾಷ್ಟ್ರೀಯ ಅಧ್ಯಕ್ಷರು ದೇವೇಗೌಡರು. ದೇವೇಗೌಡರು ಸಮಾಜವಾದಿ ಜನತಾ ಪಕ್ಷ. ಎನ್ನುವ ಪ್ರಾದೇಶಿಕ ಪಕ್ಷ ಕಟ್ಟಿದ್ದರು. ಗುದ್ದಲಿ ಹಿಡಿದ ರೈತನ ಪಕ್ಷ ಆದರೆ ಅದು ಸಫಲವಾಗಲಿಲ್ಲ ಎಂದು ಬೊಟ್ಟು ಮಾಡಿದರು. ದೇವೇಗೌಡರು…