ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ…
Tag: Forner MLC Ramesh Babu
ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ…
ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..! ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು…
ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ
ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…