ಉಡುಪಿ ನರಮೇಧ; ಮೃತರ ಕುಟುಂಬದವರಿಗೆ ಜಿ.ಎ.ಬಾವ ಸಾಂತ್ವನ; ಆರೋಪಿಯನ್ನು ಸೆರೆಹಿಡಿದ ಪೊಲೀಸ್ ಕ್ರಮಕ್ಕೆ ಶ್ಲಾಘನೆ

ಉಡುಪಿ: ಕರಾವಳಿ ಜಿಲ್ಲೆಗಳನ್ನು ತಲ್ಲಣಗೊಳಿಸಿರುವ ನರಮೇಧ ಪ್ರಕರಣ ಬಗ್ಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಳೆದ ಭಾನುವಾರ ಮಲ್ಪೆ ಸಮೀಪದ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಹಂತಕ ನಿರ್ದಯಿಯಾಗಿ ಕೊಲೆ ಮಾಡಿದ್ದು, ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಕೊಲೆ ನಡೆದ ಸ್ಥಳಕ್ಕೆ ಶಾಸಕರು ಸೇರಿದಂತೆ ಗಣ್ಯರು ಭೇಟಿ ನೀಡಿ ಮೃತರ ಬಂಧುಗಳಿಗೆ ಸಾಂತ್ವನ ಹೇಳುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಯೂ ಆದ ಹಿರಿಯ ಕಾಂಗ್ರೆಸ್ ನಾಯಕ ಜಿ.ಎ.ಬಾವ ಅವರು ಮಂಗಳವಾರ ಮಲ್ಪೆ ಸಮೀಪದ ನೇಜಾರಿನಲ್ಲಿರುವ ಮೃತರ ಮನೆಗೆ ತೆರಳಿ ಕುಟುಂಬ ಸದಸ್ಯರ ಜೊತೆ ಮಾತನಾಡಿದರು. ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಕೊಲೆಯಾಗಿದ್ದು ಮೃತರ ಸೋದರ ಸಂಬಂಧಿಯನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನಾಡಿದ ಜಿ.ಎ.ಬಾವ, ಗಾಯಾಳು ಸಹಿತ ಕುಟುಂಬದಲ್ಲಿ ನೊಂದವರಿಗೆ ನೆರವು ನೀಡುವ ಭರವಸೆ ನೀಡಿದರು. ಮೃತ…