ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ. ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ವೋಲ್ವೋ (9600 ಮಾದರಿ) ಬಸ್ಸನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪರಿಶೀಲಿಸಿದರು. KSRTC ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ‘ಐರಾವತ ಕ್ಲಬ್ ಕ್ಲಾಸ್ 2.0’ ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳ ಜೊತೆ ಈ ಹೈಟೆಕ್ ಬಸ್‌ಗಳೂ ಸೇರ್ಪಡೆಯಾಗಲಿವೆ.…