ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು…