ಬಳ್ಳಾರಿ: ಕೋಳಿ ಶೀತ ಜ್ವರ (ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ…