ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ ಬಿಹಾರ ಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ. ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ…