ಪ್ರವಾಹ ಹಿನ್ನೆಲೆ; ನೆರವಿಗೆ ಧಾವಿಸಿದ ಜ್ಯೂ.ಎನ್‌ಟಿಆರ್

ಆಂಧ್ರಪ್ರದೇಶ: ಭಾರೀ ಮಳೆಯಿಂದ ಪ್ರವಾಹ ಹಿನ್ನೆಲೆಯಲ್ಲಿ ನಟ ಜ್ಯೂನಿಯರ್ ಎಂಟಿಆರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.‌ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಎರಡು ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತೆಲುಗು ಜನರು ಈ ವಿಪತ್ತಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಅವರು, ‘ನನ್ನ ಕಡೆಯಿಂದ ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತಿದ್ದೇನೆ ಎಂದು ಬರೆದಿದ್ದಾರೆ.