ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ನಾಯಕರಿಂದ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ವಿಚಾರವು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಯಕರು ಆಗ್ರಹಿಸಿದ್ದಾರೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಇದೇ ವೇಳೆ, ಹನಿಟ್ರ್ಯಾಪ್’ಗೆ ಒಳಗಾಗುವರ ವೀಕ್ನೆಸ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕೂಡಾ ಗಮನಸೆಳೆದಿದೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಹನಿಟ್ರ್ಯಾಪ್ ಸುಮ್ಮನೆ ಆಗುತ್ತಾ? ನಾವು ಹಲೋ ಅಂದ್ರೆ ಅವರು ಹಲೋ ಅಂತಾರೆ, ನೀವು ಬಾಯ್ ಅಂದ್ರೆ ಅವರು ಬಾಯ್ ಅಂತಾರೆ ಎಂದು ಹೇಳುವ…