ಕಲಬುರಗಿ: ಸೆಪ್ಟೆಂಬರ್‌ನಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಕಲಬುರಗಿಯಲ್ಲಿ ಸುಮಾರು 192 ಕೋಟಿ ರೂ. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಯ ಶೇ. 90ರಷ್ಟು ಕಾಮಗಾರಿ ಮುಗಿದಿದ್ದು, ಬಾಕಿ ಇರುವ ವಿದ್ಯುತ್ ಪೂರೈಕೆ ಕಾರ್ಯವು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದ ಸಚಿವರು, 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳ್ಳಿದ ಬಳಿಕ, ಜಿಮ್ಸ್‌ನಲ್ಲಿನ ಆಸ್ಪತ್ರೆಯನ್ನು ಒಂದೇ ವಾರದಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು. ಕಟ್ಟಡದಲ್ಲಿ ಕಿಚನ್ ಸೇರಿದಂತೆ ಹೆಚ್ಚುವರಿ ಕಾಮಗಾರಿಗಳು ಸೇರ್ಪಡೆಯಾಗಿರುವುದರಿಂದ 72 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ಪಡೆಯಲಾಗುವುದು ಎಂದರು. ಈಗಾಗಲೇ ವೈದ್ಯಕೀಯ…