ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ: ಕೆ.ವಿ ಪ್ರಭಾಕರ್’ಗೆ KSDMF ಸನ್ಮಾನ

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ತಿಳಿಸಿದ್ದಾರೆ. KSDMF ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಡಿಜಿಟಲ್ ಮಾಧ್ಯಮ ನೀತಿಯಿಂದಾಗಿ ಬೇರೆ ಪತ್ರಿಕೆ, ಟಿವಿಯಂತೆ ಡಿಜಿಟಲ್ ಮಾಧ್ಯಮವು ಪತ್ರಿಕೋದ್ಯಮದ ಭಾಗವೆಂದು ಅಧಿಕೃತವಾಗಿದೆ. ದೇಶದಲ್ಲಿ ಡಿಜಿಟಲ್ ಪಾಲಿಸಿ ಕೆಲವು ರಾಜ್ಯಗಳಲ್ಲಿ ಇದೆಯಾದರೂ ನಮ್ಮ ರಾಜ್ಯದಲ್ಲಿ ಈ ನೀತಿ ಸಮಗ್ರವಾಗಿದ್ದು, ವೃತ್ತಿಪರವಾಗಿ ರಚನೆಯಾಗಿದೆ ಎಂದರು.…