KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ – ViDEA, 5 ಎಮ್ಕ್ಯೂಬ್ – mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳನ್ನು ಪಡೆದು ಗಮನಸೆಳೆದಿದೆ. ವೀಡಿಯಾ ಪ್ರಶಸ್ತಿಗಳು:  ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್…

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024’ ಲಭಿಸಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು ‘ವರ್ಷದ ದೇಶದ ಅತ್ಯುತ್ತಮ ಸಂಸ್ಥೆ’ ವರ್ಗದಲ್ಲಿ ಲಭಿಸಿದೆ. ನವದೆಹಲಿಯ ‘ದ ಇಂಪೀರಿಯಲ್ ಜನಪತ್ ಲೇನ್, ಜನಪತ್’ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು.

KSRTC ಕಿರೀಟಕ್ಕೆ ಮತ್ತಷ್ಟು ಗರಿ.. Global Marketing Excellence ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆ.. 

ಬೆಂಗಳೂರು: ಅತ್ಯುತ್ತಮ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. Global Marketing Excellenceಯ ಒಂದು ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಕೆಎಸ್ಸಾರ್ಟಿಸಿ’ಗೆ National Media Conclaveನ ಎರಡು ಪ್ರಶಸ್ತಿ ಹಾಗೂ World Marketing Congressನ Global Marketing Excellence ಒಂದು ಪ್ರಶಸ್ತಿ ಲಭಿಸಿದೆ. National Media Conclave Awards 23.11.2023ರಂದು ಭುವನೇಶ್ವರದ ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ National Media Conclave  ಆಯೋಜಿಸಿದ 07ನೇ National Media Conclave Award ಕಾರ್ಯಕ್ರಮ ಗಮನಸೆಳೆಯಿತು, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾಹಿತಿ ಸಾರ್ವಜನಿಕ ಸಂಪರ್ಕ,ಪಂಚಾಯತ್ ರಾಜ್, ಕುಡಿಯುವ ನೀರು ಹಾಗೂ ಅರಣ್ಯ ಮತ್ತು ಪರಿಸರ ಸಚಿವ ಪ್ರದೀಪ್ ಕುಮಾರ್ ಅಮತ್, ಉನ್ನತ ಶಿಕ್ಷಣ ಹಾಗೂ ಸಹಕಾರ ಸಚಿವ ಅತನು ಸವ್ಯಸಾಚಿ ನಾಯಕ್…