ಆಶಾ ಕಾರ್ಯಕರ್ತೆಯರ ಬೇಡಿಕೆ ವಿಚಾರದಲ್ಲಿ ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಲು ಆಗ್ರಹ

ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ…