ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಕ್ಕೆ ಸಿಎಂ ಆಗ್ರಹ

ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪಾತ್ರ ಬರೆದಿದ್ದಾರೆ. ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿಮಾಡಿದ್ದಾರೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಮೊದಲಿಗರು. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಸಿದ್ದರಾಮಯ್ಯ ಗಮನಸೆಳೆದಿದ್ದಾರೆ. ಈ ಅಪ್ರತಿಮ ನಾಯಕಿಯ ಸಮಾಧಿಯು ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು…