ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಪದ್ಮರಾಜ್ ಆರ್.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಈ ಯೋಜನೆಯಿಂದ ಕರಾವಳಿಯಲ್ಲಿ…
Tag: KPCC General Secretary Padmaraj R. Poojary.
“ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ: ಪಹಲ್ಗಮ್ ಘಟನೆ ಮರುಕಳಿಸಬಾರದು”; ಪದ್ಮರಾಜ್
ಮಂಗಳೂರು: ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಫಹಲ್ಗಾಮ್ ಕೃತ್ಯವನ್ನು ಖಂಡಿಸಿರುವ ಪದ್ಮರಾಜ್ ಪೂಜಾರಿ, ನ್ಯಾಯ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು ಎಂದು ಪ್ರತಿಪಾದಿಸಿದ್ದಾರೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆದ ಗಾಯ. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಅವಾಯಕರ ಜೀವಗಳನ್ನು ಬಲಿಯಾಗಿಸಿ, ಅನೇಕ ಕುಟುಂಬಗಳನ್ನೇ ನಾಶ ಮಾಡಿರುವುದು ಹಿಂಸಾಚಾರವಷ್ಟೇ ಅಲ್ಲ. ಸಂಪೂರ್ಣ ಅವಾನವೀಯ ಕೃತ್ಯ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ ಎಂದಿದ್ದಾರೆ. ಈ ವಿಚಾರದಲ್ಲಿ ನಾವು ಪಕ್ಷ ಭೇದ ಮರೆತು ಕೇಂದ್ರ ಸರ್ಕಾರದ ಪರ ನಿಲ್ಲುತ್ತೇವೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ…