ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…

BSY ಅವರನ್ನು ಮೂಲೆಗುಂಪಾಗಿಸಲು JDS ಜೊತೆ ಮೈತ್ರಿಗೆ BJP ನಾಯಕರಿಂದ ಮುದ್ರೆ; ರಮೇಶ್ ಬಾಬು

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗುಂಪಾಗಿಸಲು ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ನಾಯಕರು ಮುದ್ರೆ ಒತ್ತಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರೂ ಆದ ರಮೇಶ್ ಬಾಬು ವಿಶ್ಲೇಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಬಿಜೆಪಿಯ 26 ಶಾಸಕರು ಹೈಕಮಾಂಡಿಗೆ ಪತ್ರ ಬರೆದು ಬೊಮ್ಮಾಯಿ ಅವರಿಗೆ ಸರ್ಕಾರ ನಡೆಸಲು ಶಕ್ತಿ ಇಲ್ಲ ಎಂದಿದ್ದರು. ಅವರನ್ನು ಕೆಳಗೆ ಇಳಿಸಿ ಎಂದು ಮಾಡಿದ್ದರು, ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗೆ ತಳ್ಳಲು ಹುನ್ನಾರ ಮಾಡಿದವರೇ ಇಂದು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುದ್ರೆ ಒತ್ತಿದ್ದಾರೆ ಎಂದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಮತ್ತೆ ಯಡಿಯೂರಪ್ಪ ಅವರ ಚುಕ್ಕಾಣಿಗೆ ಹೋಗಿತ್ತು, ಅದನ್ನು ತಪ್ಪಿಸಲು ಈ ಮೈತ್ರಿಯ ಹುನ್ನಾರ. ವ್ಯವಸ್ಥಿತವಾಗಿ ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸುವ ಕೆಲಸ ಇದಾಗಿದೆ. ಹಿರಿಯ ನಾಯಕನಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಲಾಗುತ್ತಿದೆ…