ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…