ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು RSSನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ…