KRSನಿಂದ ಒಂದು ಹನಿ ನೀರು ಬಿಡುವುದಿಲ್ಲ: ಸರ್ಕಾರದ ಸ್ಪಷ್ಟನೆ

ಬೆಂಗಳೂರು:”3,000 ಸಾವಿರ ಕ್ಯೂಸೆಕ್ಸ್ ನೀರಿನಲ್ಲಿ ಕೆಆರ್‌ಎಸ್‌ ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ಮಂಡ್ಯ ಭಾಗದ ರೈತರ ಹಿತ ಮುಖ್ಯ” ಎಂದರು. 12,500 ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು, ನಿಮ್ಮ ಹೋರಾಟದಿಂದ ಸಮಿತಿ 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದೆ. ಮತ್ತೊಮ್ಮೆ ಹೋರಾಟ ಏತಕ್ಕೆ ಎಂದರು. ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ, ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ ಬಂದ್ ಬೇಡ…

ಕಾವೇರಿ ವಿಚಾರದಲ್ಲಿ ಯಾವುದೇ ಒತ್ತಡಕ್ಕೂ ಮಣಿಯದಿರಿ, ನುಡಿದಂತೆ ನಡೆಯಿರಿ; ಕುರುಬೂರು ಆಗ್ರಹ

ಮೈಸೂರು: ಕಾವೇರಿ ನದಿ ನೀರು ವಿಚಾರದಲ್ಲಿ ಯಾವ ಒತ್ತಡಕ್ಕೂ ಮಣಿಯದೆ ನುಡಿದಂತೆ ನಡೆಯಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.‌ ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಧಿಕ್ಕರಿಸಬೇಕು, ಯಾವುದೇ ಕಾರಣಕ್ಕೂ ನೀರು ಬಿಡುವ ನಿರ್ಧಾರ ಮಾಡಬಾರದು ಬೆಂಗಳೂರು, ಮೈಸೂರು, ನಗರದ ಜನ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ನಿಮ್ಮ ಕ್ಷೇತ್ರದ ಶಾಸಕರ ಗಮನ ಸೆಳೆಯುವ ಹೋರಾಟ ನಡೆಸಬೇಕು ಎಂದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ನೀರು ಬಿಡುವುದಿಲ್ಲ ಎನ್ನುವ ತೀರ್ಮಾನ ಕೈಗೊಂಡಿದೆ ನುಡಿದಂತೆ ನಡೆದುಕೊಳ್ಳಬೇಕು ಇಂದಿನ ಪರಿಸ್ಥಿತಿಯಲ್ಲಿ ಜಲಾಶಯಗಳು ಖಾಲಿಯಾಗಿದೆ, ನೀರು ಬಿಡುವುದಿಲ್ಲ ಎನ್ನುವ ಬದ್ಧತೆಯನ್ನು ತೋರಬೇಕು ಆದೇಶ ಧಿಕ್ಕರಿಸಬೇಕು ರಾಜ್ಯದ ಜನರ ಹಿತ ರಕ್ಷಣೆಗಾಗಿ ಸರ್ಕಾರ ಕೆಲಸ ಮಾಡಬೇಕು ಈಗಾಗಲೇ ಕಾವೇರಿ ಅಚ್ಚುಕಟ್ಟು ಭಾಗದ ರೈತರ…

ತಮಿಳುನಾಡಿಗೆ 15 ದಿನ 5,000 ಕ್ಯೂಸಸ್ ನೀರು ಬಿಟ್ಟರೆ ಕಾವೇರಿ ಅಚ್ಚುಕಟ್ಟು ರೈತರ ಮರಣ ಶಾಸನ; ಹೋರಾಟದ ಎಚ್ಚರಿಕೆ ನೀಡಿದ ಕುರುಬೂರು ಶಾಂತಕುಮಾರ್

ಬೆಂಗಳೂರು: ತಮಿಳುನಾಡಿಗೆ 15 ದಿನ 5,000 ಕ್ಯೂಸಸ್ ನೀರು ಬಿಟ್ಟರೆ ಅದು ಕಾವೇರಿ ಅಚ್ಚುಕಟ್ಟು ರೈತರ ಮರಣ ಶಾಸನವಾಗುತ್ತದೆ. ಇದರಿಂದ ಆರು ಟಿ ಎಂ ಸಿ ನೀರು ಖಾಲಿಯಾಗುತ್ತದೆ ಎಂದು  ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ‌ ಶೇಕಡ 64% ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ ಈಗಾಗಲೇ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. KRS 100 ಅಡಿಗೆ ಬಂದಿದೆ. ಕಬಿನಿ 72 ಅಡಿಗೆ ಇಳಿದಿದೆ. ಕುಡಿಯುವ ನೀರಿಗೂ ಸಂಕಷ್ಟ ಪಡುವ ಪರಿಸ್ಥಿತಿ ಇರುವಾಗ ಪ್ರಾಧಿಕಾರ ನೀರು ಬಿಡಲು ಹೇಗೆ ಸೂಚನೆ ನೀಡಿತು ಎಂದು ಕುರುಬೂರು ಶಾಂತಕುಮಾರ್ ಪ್ರಶ್ನಿಸಿದ್ದಾರೆ. s ಇದು ಸರಿಯಾದ ಕ್ರಮ ಅಲ್ಲ. ಇದರ ವಿರುದ್ಧ ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಪುನರ್ ಪರಿಶೀಲನ ಮನವಿ ಸಲ್ಲಿಸಲಿ. ನೀರು ಬಿಡಲು ಸಾಧ್ಯವಿಲ್ಲ ಎಂದು ಕಡಾ ಖಂಡಿತವಾಗಿ ಹೇಳಲಿ. ರಾಜ್ಯದ ರೈತರನ್ನು…