KSRTC: ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಹುಮ್ನಾಬಾದ್‌‌ನಲ್ಲಿ ನ.7ರಿಂದ ಚಾಲನಾ ವೃತ್ತಿ ಪರೀಕ್ಷೆಯ ಅಂತಿಮ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. 18-09-2024ರಿಂದ ಏರ್ಪಡಿಸಲಾಗಿದ್ದ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು 07-11-2024 ರಿಂದ 11-11-2024 ರವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ನಿಗಮ ನಡೆಸಲಿದೆ. ಈ ಸಂಬಂಧ ನಿಗಮ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 18-09-2024 ರಿಂದ ನಡೆಸಲಾಗುತ್ತದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್‌. ಎಂ.ಎಸ್‌ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ…