ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ‘ಪಾಯಿಂಟ್ ಟು ಪಾಯಿಂಟ್’ ಮತ್ತು ವೇಗದೂತ ಕಾರ್ಯಾಚರಣೆಗೆ ಹೊಸ ವ್ಯವಸ್ಥೆ ರೂಪಿಸಿದೆ. ಈ ಸೇವೆಗಾಗಿ ನಿಯೋಜಿಸಲಾಗುವ ನೂತನ ಕರ್ನಾಟಕ ಸಾರಿಗೆ ವಾಹನ ‘ಪ್ರೋಟೋ ಟೈಪ್ ವಾಹನ’ ವಿನ್ಯಾಸ ಗಮನಸೆಳೆದಿದೆ. ಈ ವಿನ್ಯಾಸವನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಪರಿಶೀಲಿಸಿದರು. ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬಸ್ಸುಗಳನ್ನು ಪರಿಶೀಲಿಸಿದ ಸಚಿವರು ಮಾಹಿತಿ ಪಡೆದರು. ಈ ನೂತನ ವ್ಯವಸ್ಥೆಯ ಹೈಲೈಟ್ಸ್ ಹೀಗಿದೆ: ನೂತನವಾಗಿ ಕಾರ್ಯಾಚರಣೆಗೆ ನಿಯೋಜಿಸಲಾಗುವ ಕರ್ನಾಟಕ ಸಾರಿಗೆ ವಾಹನವನ್ನು ಮೆ. ಕೆ.ಎಂ.ಎಸ್. ಕೋಚ್ ಬಿಲ್ಡರ್ಸ್‌ರವರು ನಿರ್ಮಾಣ ಮಾಡಿದ್ದಾರೆ. ಈ ಬಸ್ಸುಗಳು ಹಲವಾರು ವಿಶಿಷ್ಟತೆಗಳನ್ನು ಹೊಂದಿವೆ. ವಾಹನದ ಎತ್ತರ 3420 ಮಿ.ಮಿ. ಆಸನಗಳ ಸಂಖ್ಯೆ 52 ಪ್ರಯಾಣಿಕರ ಆಸನ ಬಕೆಟ್ ಟೈಪ್ ವಾಹನದ ಮುಂದಿನ/ ಹಿಂದಿನ ಗಾಜು ವಿಶಾಲವಾಗಿರುತ್ತದೆ. ಪ್ರಯಾಣಿಕರ ಕಿಟಕಿ ಪ್ರೇಮ್ ಹಾಗೂ ಮೇಲಿನ ಗಾಜು ವಿಶಾಲವಾಗಿರುತ್ತದೆ…