ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ. ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ. ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ…
Tag: Kuruburu shanthakumar
ತುಂಗಭದ್ರಾ ಜಲಾಶಯ ಅವಘಡ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ, ಸಚಿವ ಡಿಕೆಶಿ ರಾಜೀನಾಮೆ ನೀಡಲಿ; ಕುರುಬೂರು ಆಗ್ರಹ
ಬಳ್ಳಾರಿ: ತುಂಗಭದ್ರಾ ಗೇಟ್ ಮುರಿದ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ. ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯ ಗೇಟ್ ಮುರಿದು ನೀರು ಖಾಲಿಯಾಗಿ ರೈತರ ಬದುಕು ಹಾಳಾಗಲು. ಸರ್ಕಾರದ ನಿರ್ಲಕ್ಷತನವೇ ಕಾರಣ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ದೂರಿದ್ದಾರೆ. ಕಳೆದ ಒಂದು ತಿಂಗಳಿಂದ ನಿರಂತರ ಮಳೆ. ಪ್ರವಾಹ ಬರುತ್ತಿದ್ದರೂ ಜಲಾಶಯಗಳ ಸುರಕ್ಷತೆ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸದೆ ಸರ್ಕಾರ ನಿರ್ಲಕ್ಷ್ಯ ತಾಳಿದೆ. ಇದು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಬೇಜವಾಬ್ದಾರಿತನ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ 4-5 ಜಿಲ್ಲೆಗಳ 22 ಲಕ್ಷ ಎಕ್ಟರ್ ನಲ್ಲಿ ಭತ್ತ ಬೆಳೆಯುತ್ತಿದ್ದ ರೈತರ ಬದುಕು ನಾಶವಾಗಲು ಕಾರಣವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ನೀರಾವರಿ ಸಲಹಾ…