ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ರಾಕೇಶ್ ಕಿಶೋರ್ ನಡೆಸಿರುವ ದಾಳಿಯನ್ನು ಇಡೀ ದೇಶವೇ ಖಂಡಿಸಬೇಕಿದೆ. ಕೃತ್ಯ ಎಸಗಿದ ವ್ಯಕ್ತಿಯ ವಿರುದ್ಧ ಮೊಕದ್ದಮೆ ದಾಖಲಿಸಿ, ಅಪರಾಧಿಗೆ ಶಿಕ್ಷೆ ಆಗಲೇಬೇಕಿದೆ ಎಂದಿದ್ದಾರೆ. ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಿರುವ ಘಟನೆಯನ್ನು ಸಹಿಸಲಾಗದು. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮಾತ್ರವಲ್ಲ, ಸಂವಿಧಾನಕ್ಕೂ ಮಾಡಿರುವ ಅಪಚಾರವಾಗಿದೆ. ತಮ್ಮ ಮೇಲೆ ಶೂ ಎಸಗಿದವನನ್ನು ಕ್ಷಮಿಸಿರುವುದು ಮುಖ್ಯ ನ್ಯಾಯಮೂರ್ತಿಗಳ ಒಳ್ಳೆಯ ಗುಣವೇ ಆಗಿರಬಹುದು. ಆದರೆ, ಇದು ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಆಘಾತ ಎಂದು…