ಬಸವೇಶ್ವರ, ಅಂಬೇಡ್ಕರ್ ಗೌರವ ಕೈಂಕರ್ಯ; ಲಂಡನ್ ಸಮಾರಂಭಕ್ಕೆ ಸಿಎಂಗೆ ಆಹ್ವಾನ

ಬೆಂಗಳೂರು: ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವಣ್ಣರ ತತ್ವಗಳನ್ನು ಜಗತ್ತಿನ ಉದ್ದಗಲಕ್ಕೆ ಸಾರುತ್ತಿರುವ ಯುನೈಟೆಡ್ ಕಿಂಗ್‌ಡಂನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಬಾರಿ ವಿಭಿನ್ನ ರೀತಿಯ ಕಾರ್ಯಕ್ರಮದ ತಯಾರಿಯಲ್ಲಿದೆ. ಲಂಡನ್ ನಗರಿಯ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ವತಿಯಿಂದ ಪ್ರತೀ ವರ್ಷ ಸಾಮಾಜಿಕ ಕೈಂಕರ್ಯಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಲಂಡನ್ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಮುಂದಾಳುತ್ವದಲ್ಲಿ 2016ರಲ್ಲಿ ಲಂಡನ್‌ನ ಸಂಸತ್ ಭವನ ಬಳಿ, ಥೇಮ್ಸ್ ನದಿ ತೀರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲಾಗಿತ್ತು. ಈ ಮೂರ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಅಂದಿನಿಂದ ಈ ಸ್ಥಳ ಅತ್ಯಂತ ಶ್ರದ್ಧಾಸ್ಥಳವಾಗಿ ಜಾಗತಿಕ ಗಮನಸೆಳೆಯುತ್ತಿದೆ. ಈ ಸ್ಥಳದಲ್ಲೇ ಸಾಮಾಜಿಕ ಹರಿಕಾರರಾದ ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಕಾರ್ಯಕ್ರಮ ಆಯೋಜಿಸಲು ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸಿದ್ದತೆ ಕೈಗೊಂಡಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಲಂಡನ್ ಮಾಜಿ ಮೇಯರ್…