ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ಗಮನಸೆಳೆಯಿತು. ಮ್ಯಾರಥಾನ್‌ ನಲ್ಲಿ ಚಿಣ್ಣರಿಂದ ವೃದ್ಧರವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಕೇರಳ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21 ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ. 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ…