ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ. ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು…
Tag: minister ramalinga reddy
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ‘ನಂದಿನಿ ತುಪ್ಪ’ ಮಾತ್ರ ಬಳಕೆ; ಸರ್ಕಾರದ ಕಟ್ಟಪ್ಪಣೆ
ಬೆಂಗಳೂರು: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆಯಂತೆ ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ತಿರುಪತಿ ದೇಗುಲದ ಪ್ರಸಾದದಲ್ಲಿ ನಕಲಿ ತುಪ್ಪ ಬಳಕೆ ಮಾಡಲಾಗಿತ್ತೆಂಬ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಈಗಿನ ಸರ್ಕಾರದ ಸೂಚನೆಯಂತೆ ತಿರುಪತಿ ದೇವಾಲಯವು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಉತ್ಪನ್ನವಾಗಿರುವ ‘ನಂದಿನಿ ತುಪ್ಪ’ವನ್ನು ಖರೀದಿಸುತ್ತಿದೆ. ಇದೀಗ ರಾಜ್ಯದ ಮುಜರಾಯಿ ದೇಗುಲಗಳಲ್ಲೂ ನಂದಿನಿ ತುಪ್ಪವನ್ನೇ ಬಳಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪ ವನ್ನು ಮಾತ್ರ ಬಳಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ,…
ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದು (28.08.2024) ಸಾರಿಗೆ ಆಯುಕ್ತರ ಕಛೇರಿಯಲ್ಲಿ, ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ಕುರಿತಂತೆ ಮಾಹಿತಿ ಪಡೆದ ಸಚಿವರು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಿದರು. 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ: ವಾರ್ಷಿಕ ರಾಜಸ್ವ ಗುರಿ- ರೂ.13000ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ. ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534…
‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ ಟ್ವೀಟ್‌ಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡೊರುವ ರಾಮಲಿಂಗಾರೆಡ್ಡಿ, ‘ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತ. ಆದರೂ ನಮ್ಮ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ’ ಎಂದಿದ್ದಾರೆ. ಕರ್ನಾಟಕ ಸರ್ಕಾರವು 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಸಂಸ್ಥೆಗಳ…
‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್
ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು. ಪ್ರವರ್ಗ ‘ಎ’ ಮತ್ತು ‘ಬಿ’ ಅಧಿಸೂಚಿತ ದೇವಾಲಯಗಳಲ್ಲಿ ‘ಮಾಂಗಲ್ಯ ಭಾಗ್ಯ’ ಯೋಜನೆ ಅಡಿ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಯಿತು. ಈ ಕಾರ್ಯಕ್ರಮ ಮುಜರಾಯಿ ಸಚಿವರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕ ಎಂ.ಆರ್. ಮಂಜುನಾಥ್, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಆಧಿಕಾರಿಗಳು ಉಪಸ್ಥಿತರಿದ್ದರು. ದೇಶಿಕೇಂದ್ರ ಮಹಾಸ್ವಾಮಿ, ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಆಶೀರ್ವಚನವನ್ನು ನೀಡಿದರು. ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಆಧಾರರಹಿತ ಆರೋಪಗಳನ್ನು ಮುಂದಿಟ್ಟು ನೀಡಲಾದ ಮನವಿ ಬಗ್ಗೆ ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. “ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ” ಎಂದು ಅವರು ಗೌರ್ನರ್ ವಿರುದ್ದ ಗುಡುಗಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ರಾಮಲಿಂಗಾ ರೆಡ್ಡಿ, ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು ಕಾರಣ ನೀಡಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ಎಂದರೆ, ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಬಿಜೆಪಿಗರು…
ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು. ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು. ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ…
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ..
ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಘೋಷಣೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವನಿತೆಯರ ಬಳಗದಲ್ಲಿ ರಣೋತ್ಸಾಹ ಕಂಡುಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ನಾಯಕಿಯರಿಂದ ಭಾರೀ ಲಾಭಿ ನಡೆದಿತ್ತಿತ್ತು. ಸ್ಥಾನದಲ್ಲಿ ಮುಂದುವರಿಯಲು ಪುಷ್ಪ ಅಮರನಾಥ್ ಅವರು ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಕವಿತಾ ರೆಡ್ಡಿ ಕೂಡಾ ದೆಹಲಿಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಹೈಕಮಾಂಡ್ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಆರ್‌ವಿ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸೌಮ್ಯ ರೆಡ್ಡಿ, ENVIRONMENT TECHNOLOGY ಯಲ್ಲಿ NEW YORK INSTITUTE OF TECHNOLOGYಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರ ಎಂದೇ ಗುರುತಾಗಿರುವ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ತಿಯಾಗಿರುವ ಸೌಮ್ಯ ರೆಡ್ಡಿ, ತಾವು…
‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ
ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ – ಜೆಡಿಎಸ್ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ ಬಿಜೆಪಿ. ಅಳ್ಲಿರುವವರೆಲ್ಲ ಭ್ರಷ್ಟರೇ, ಅವರನ್ನು ಕಡು ಭ್ರಷ್ಟರು ಎಂದರೆ ತಪ್ಪಿಲ್ಲ ಎಂದರು. ಭ್ರಷ್ಟರಲ್ಲೇ ಅತಿ ಭ್ರಷ್ಟರು ಇರುವುದು ಬಿಜೆಪಿ ಪಕ್ಷದಲ್ಲಿ, ಹಾಗಾಗಿ ಅದೊಂದು ಭ್ರಷ್ಟಾಚಾರದ ಗಂಗೋತ್ರಿ. ಬಿಜೆಪಿಯೇತರ ಪಕ್ಷಗಳಲ್ಲಿದ್ದ ಭ್ರಷ್ಟರನ್ನೆಲ್ಲ ಐಟಿ, ಇಡಿ ಮೂಲಕ ಹೆದರಿಸಿ, ಬೆದರಿಸಿ ಬಿಜೆಪಿಗೆ ಸೇರಿಸಿಕೊಂಡು ಹಲವು ಹುದ್ದೆಗಳನ್ನು ನೀಡಿದ್ದಾರೆ. ಇಂತಹ ಭ್ರಷ್ಟರೆಲ್ಲ ಸೇರಿ ಅದು ಭ್ರಷ್ಟರ ಪಕ್ಷ ಆಗಿದೆ. ಅಂತಹ ಭ್ರಷ್ಟರು ಈಗ… pic.twitter.com/NW8KtwNhbR — Karnataka Congress (@INCKarnataka) August…
ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ..
ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ ಪ್ರಮುಖರ ಶ್ಲಾಘನೆ.. ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಸಂಭ್ರಮ ಸಡಗರದ ನಡುವೆ ಧಾರ್ಮಿಕ ಮಂದಿರಗಳಲ್ಲಿ, ಪುಣ್ಯ ಕ್ಷೇತ್ರಗಳಲ್ಲೂ ವಿವಿಧ ಕೈಕರ್ಯಗಳು ನೆರವೇರಿದವು. ಬೆಂಗಳೂರಿನ ಪೇಜಾವರ ಮಠದಲ್ಲಿ ಬೆಳಕಿನ ಹಬ್ಬ ಸಂದರ್ಭದ ಕೈಂಕರ್ಯ ಆಸ್ತಿಕವಲಯದ ಕೇಂದ್ರಬಿಂದುವಾಯಿತು. ಸಾರಿಗೆ ಸಚಿವ ರಾಮಲಿ೦ಗಾರೆಡ್ಡಿ ಸಹಿತ ಗಣ್ಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು. ಮುಜರಾಯಿ ಖಾತೆಯನ್ನೂ ಹೊಂದಿರುವ ರಾಮಲಿಂಗಾರೆಡ್ಡಿಯವರು ಬೆ೦ಗಳೂರಿನ ಬಸವನಗುಡಿ ಸಮೀಪದ ವಿದ್ಯಾಪೀಠ ಸರ್ಕಲ್ ಬಳಿಯ ಪೇಜಾವರ ಮಠಕ್ಕೆ ಭೇಟಿ ನೀಡಿ ಗೋಪೂಜೆ ಮತ್ತು ಗೋವಿನ ಬೆಳ್ಳಿ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಂತ್ರಿ ರಾಮಲಿಂಗಾರೆಡ್ಡಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೌರವಿಸಿದ ಸನ್ನಿವೇಶವೂ ಗಮನಸೆಳೆಯಿತು. ರಾಜ್ಯದ ದೇಗುಲಗಳ ಅಭಿವೃದ್ಧಿ ವಿಚಾರದಲ್ಲಿ ಅಪೂರ್ವ ಸುಧಾರಣಾ…