ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಈ ನಡುವೆ ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಿಗರಿಗೆ ಸರ್ಕಾರದ ವತಿಯಿಂದ ನೆರವಾಗಲು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ತೆರಳಿದೆ. ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಚರ್ಚಿಸಿರುವ ಸಚಿವ ಸಂತೋಷ್ ಲಾಡ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ. ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ…