ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ. ಇದೇ ವೇಳೆ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಹಿತ 15 ಶಾಸಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂದು ಸಿಟ್ಟು ಹೊರಹಾಕಿದ್ದು, ತಮ್ಮ ನಿಲುವನ್ನು ಮರು ಪರಿಶೀಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್, ಭೀಮರಾವ್ ಪಾಟಿಲ. ತಿಪ್ಪಣ್ಣಾ…