ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು RSSನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ…

ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ರಾಜಕೀಯಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ ವಿರುದ್ದ ಸಿಎಂ ಕಾನೂನು ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು. ಬಿ.ಎಸ್‌.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಚೆಕ್‌ ಮೂಲಕ ಲಂಚ ಸ್ವೀಕರಿಸಿದ ಹಾಗೂ ಡಿನೋಟಿಫಿಕೇಶನ್‌ ಪ್ರಕರಣಗಳಲ್ಲಿ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾಗ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದರೂ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯಲ್ಲಿ ತಪ್ಪಿತಸ್ಥ ಎಂದು ದೃಢಪಟ್ಟ ಬಳಿಕವಷ್ಟೇ ರಾಜೀನಾಮೆ ನೀಡಿದ್ದರು ಎಂದು ಮಂಜುನಾಥ ಭಂಡಾರಿ ನೆನಪಿಸಿದರು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿನ ಸರ್ಕಾರ ಪತನಗೊಳಿಸುವ ಷಡ್ಯಂತ್ರವನ್ನು ಬಿಜೆಪಿ…

11 ಮಸೂದೆಗಳು ವಾಪಸ್‌: ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ. ಇದೇ ವೇಳೆ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಹಿತ 15 ಶಾಸಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂದು ಸಿಟ್ಟು ಹೊರಹಾಕಿದ್ದು, ತಮ್ಮ ನಿಲುವನ್ನು ಮರು ಪರಿಶೀಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್‌, ಭೀಮರಾವ್‌ ಪಾಟಿಲ. ತಿಪ್ಪಣ್ಣಾ…

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ…