ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ. ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ “ಜನಾಂದೋಲನ” ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ…
Tag: MUDA Scam
ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ…
ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತಂತೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹಿನ್ನೆಲೆ ರಾಜ್ಯಪಾಲರು ಸಿಎಂಗೆ ನೀಡಿರುವ ನೊಟೀಸ್ ಇದೀಗ ವಿದ್ಯಮಾನಗಳ ಕೇಂದ್ರಬಿಂದುವಾಗಿದ್ದು, ಈ ವಿಚಾರದಲ್ಲಿ ಇಂದು (ಆ.1) ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವೊಂದು ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಂತಿದೆ. ಅಷ್ಟಕ್ಕೂ ಸಂಪುಟದ ತೀರ್ಮಾನ ಏನು..? ರಾಜ್ಯಪಾಲರು ನೀಡಿರುವ ನೊಟೀಸ್ ಸಿದ್ದರಾಮಯ್ಯ ಅವರನ್ನು ಆತಂಕಕ್ಕೀಡು ಮಾಡಿದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೂ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ. ಇಂದು ವೇಳೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇ ಆದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿಯೂ ಎದುರಾಗಬಹುದು. ಈ ಹಿನ್ನೆಲೆಯಲ್ಲಿ…