ಒಳಮೀಸಲಾತಿ: ನಾಗಮೋಹನ್ ದಾಸ್ ಆಯೋಗದಿಂದ 4 ಪ್ರಮುಖ ಶಿಫಾರಸ್ಸು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನುಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ…