ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ. ಜನಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದವರು ಹೇಳಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿರುವ ಮೋದಿ, ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ ಎಂದಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದವರು ಭರವಸೆ ನೀಡಿದ್ದಾರೆ. Jana Shakti is paramount! Development wins, good governance…
Tag: narendra modi
ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಈ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!
ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ. ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. “ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು” –ಯತ್ನಾಳ್ ಆಗ್ರಹ. Karnataka BJP MLA Basanagouda R Patil writes a letter to PM Narendra Modi “I humbly request your esteemed office to consider nationalizing Waqf properties…
ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಈ ಒಂದು ಮುದ್ದಾದ ಅತಿಥಿ ಜೊತೆಗಿನ ವಿಡಿಯೋವನ್ನು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. हमारे शास्त्रों में कहा गया है – गाव: सर्वसुख प्रदा:’। लोक कल्याण मार्ग पर प्रधानमंत्री आवास परिवार में एक नए सदस्य का शुभ आगमन हुआ है। प्रधानमंत्री आवास में प्रिय गौ माता ने एक नव वत्सा को जन्म दिया है, जिसके मस्तक पर ज्योति का चिह्न है। इसलिए, मैंने इसका नाम ‘दीपज्योति’… pic.twitter.com/NhAJ4DDq8K — Narendra Modi (@narendramodi) September 14, 2024 ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಪುಟ್ಟ ಕರು ಆಗಮಿಸಿದೆ. ಆ ಮುಗ್ದ ಕರುವನ್ನು…