ಲೋಕಸಭಾ ಚುನಾವಣೆಯಲ್ಲಿ ರೈತರ ಬೆಂಬಲ ಯಾವ ಪಕ್ಷಕ್ಕೆ? 20 ರಾಜ್ಯಗಳಲ್ಲಿ ಪಂಚಾಯತ್ ಸಮಾವೇಶದಲ್ಲಿ ತೀರ್ಮಾನ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ರೈತರು ಯಾವ ಪಕ್ಷವನ್ನು ಬೆಂಬಿಸಬೇಕು ಎಂಬ ಬಗ್ಗೆ ನಿರ್ಧರಿಸಲು ದೇಶಾದ್ಯಂತ 20 ರಾಜ್ಯಗಳಲ್ಲಿ ರೈತರ ಕಿಸಾನ್ ಮಹಾ ಪಂಚಾಯತ್ ಸಮಾವೇಶ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರಾಷ್ಟ್ರೀಯ ಸಭೆ ತೀರ್ಮಾನಿಸಿದೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸಂಘಟನೆಯ ಎರಡು ದಿನಗಳ ಸಭೆಯಲ್ಲಿ ಚರ್ಚಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರೈತರು ಯಾವ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ತೀರ್ಮಾನ ಕೈಗೊಳ್ಳಲು 20 ರಾಜ್ಯಗಳಲ್ಲಿ ಕಿಸಾನ್ ಮಹಾಪಂಚಾಯತ್ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು ಅಂತಿಮವಾಗಿ ನವ ದೆಹಲಿಯಲ್ಲಿ 2024ರ ಫೆಬ್ರವರಿ 26ರಂದು 10 ಲಕ್ಷ ರೈತರ ದೆಹಲಿ ಚಲೋ ರ್ಯಲಿ ನಡೆಸಿ ಅಂತಿಮ ಘೋಷಣೆ ಪ್ರಕಟಿಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ, ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ತಿಳಿಸಿದ್ದಾರೆ.‌ ಸಭೆಯ ತೀರ್ಮಾನಗಳ ಕುರಿತು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರೂ ಆದ ಕುರುಬೂರು ಶಾಂತಕುಮಾರ್ ಸಹಿತ ವಿವಿಧ ರಾಜ್ಯಗಳ…