ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ಆರಂಭಿಸಲಾಗಿದೆ. ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸುದಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಯಡಿಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವ್ಯಾಪಕವಾದ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆ ಮತ್ತು ಶಿಕ್ಷಣವನ್ನು ನೀಡಲು ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ನಿಂದ ಎಲ್ಲಾ ಆಡಳಿತ ಹಂತಗಳಲ್ಲಿ ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. “ಮಾದಕ ದ್ರವ್ಯ ಮುಕ್ತ ಕರ್ನಾಟಕ…