ರಾಜ್ಯದಲ್ಲಿ HSRP ಅಕ್ರಮಕ್ಕೆ ಅವಕಾಶ ಇಲ್ಲ; ಕೇಂದ್ರ ಮಾರ್ಗಸೂಚಿ ಮೀರಲ್ಲ; ರಾಮಲಿಂಗ ರೆಡ್ಡಿ ನಿರ್ಧಾರಕ್ಕೆ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು…

ಅಕ್ಕಿ ಜಟಾಪಟಿ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…

ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌

ಬೆಂಗಳೂರು: ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌ ಹೊರಡಿಸಿದೆ. ಯಾವ ತರಗತಿಯ ಮಕ್ಕಳಿಗೆ ಎಷ್ಟು ತೂಕದ ಚೀಲದ ಹೊರೆ ಇರಬೇಕೆಂಬ ಬಗ್ಗೆ ಸುತ್ತೋಲೆಯಲ್ಲಿ ಹೇಳಲಾಗಿದೆ. ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ಹೊರಬಹುದು ಎಂಬ ಮೂಳೆ ತಜ್ಞರ ಶಿಫಾಸು ಆಧರಿಸಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಬಗ್ಗೆ ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಸೂಕ್ತ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ಚೀಲದ ತೂಕ ಇಷ್ಟೇ ಇರಬೇಕು: 1ರಿಂದ 2ನೇ ತರಗತಿ ವರೆಗಿನ ಮಕ್ಕಳಿಗೆ 1.5 ರಿಂದ 2 ಕಿಲೋ 3ರಿಂದ 5ನೇ ತರಗತಿ…

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಜೂ.​​22 ರಂದು ಕರ್ನಾಟಕ ಬಂದ್​​ಗೆ ಕರೆ

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಆರಂಭಿಕ ಆಘಾತವಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕೈಗಾರಿಕೋದ್ಯಮಿಗಳು ಕರ್ನಾಟಕ ಬಂದ್ ಕರೆ ನೀಡುವ ಮೂಲಕ‌ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೈಗಾರಿಕೋದ್ಯಮಿಗಳು,  ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಕೆಸಿಸಿಐ ಒಂದು ವಾರಗಳ ಗಡುವು ವಿಧಿಸಿತ್ತು. ದರ ಏರಿಕೆ ಆದೇಶವನ್ನು ಹಿಂಪಡೆಯದಿದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು. ಈ ಎಚ್ಚರಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯ ಬಂದ್‌ಗೆ…

ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ?

ಹಾವೇರಿ : ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ದರ ಕಟ್ಟಲಿಲ್ಲಾ ಎಂದರೆ ಕರೆಂಟ್ ಸಪ್ಲೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೂ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದರು. ಜನಗಳಿಗೆ ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಬೋರ್ ವೆಲ್ ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೆ ಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಆಹಾಕಾರ ಆಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ…

ಗ್ಯಾರೆಂಟಿ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಸಲಹೆ

ಹಾವೇರಿ : ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ‌ ಎಂದರು. ಒಂದು ಗ್ರಾಮಕ್ಕೆ ಕುಡಿಯುವ ನೀರು ಆರೋಗ್ಯದ ಜೊತೆಗೆ ಶಾಲಾ ಕೊಠಡಿಗಳು ಮುಖ್ಯವಾಗಿದೆ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆ ಅಡಿಯಲ್ಲಿ ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ ಎಂದರು. ರೈತನ…

40 ಅಡಿ ಆಳದ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ಪಾರು ಮಾಡಿದ ಪೇಜಾವರ ಶ್ರೀ..

ಉಡುಪಿ: ಸಮಾಜಮುಖಿ ಸ್ವಾಮೀಜಿಗಳು ಸಮಾಜಕ್ಕೆ ಕಂಟಕ ಎದುರಾದಾಗ ಸಮಸ್ಯೆ ಬಗೆಹರಿಸಲು ತಾವೇ ಆಖಾಡಕ್ಕೆ ಧುಮುಕುವುದುಂಟು. ಕೆಲವೊಮ್ಮೆ ಪವಾಡ ಮೂಲಕ ಶಿಷ್ಯ ಸಮುದಾಯವನ್ನು ಅಚ್ಚರಿಗೊಳಿಸಿದ್ದೂ ಉಂಟು. ಇಲ್ಲಿ ಪೇಜಾವರ ಶ್ರೀಗಳು ಕೂಡಾ ಮೂಕ ಪ್ರಾಣಿಯನ್ಬು ರಕ್ಷಿಸಲು ಮುಂದಾದ ಪ್ರಸಂಗ ನೋಡುಗರನ್ನು ನಿಬ್ಬೆರಗಾಗಿಸಿದೆ. ಉಡುಪಿಯ ಪೇಜಾವರ ಮಠಾಧೀಶರು ಕೃಷ್ಣ ಮಠ ಸಮೀಪದ ಬಾವಿಯೊಂದಕ್ಕೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಲು ತಾವೇ ಬಾವಿಗಿಳಿದರು. ಕಾವಿ ತೊಟ್ಟಿರುವ ಶ್ರೀಗಳು ತಮ್ಮ ಕಾವಿ ವಸ್ತುವನ್ನು ಕಳಚಿ ಸರಸರನೆ ಬಾವಿಗಿಳಿದ ವೈಖರಿಯು ಅಚ್ಚರಿ ಹಾಗೂ ಕುತೂಹಲದ ಸನ್ನಿವಶಕ್ಕೆ ಕಾರಣವಾಯಿತು. ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಧಾರ್ಮಿಕ ಕಾರ್ಯಕ್ಕೂ ಸೈ, ಸಾಮಾಜಿಕ ಕಾರ್ಯಕ್ಕೂ ಸೈ ಎನಿಸಿಕೊಂಡವರು. ತಮ್ಮ ಬಿಡುವಿನ ವೇಳೆ ನೀಲಾವರದ ಗೋಶಾಲೆಯಲ್ಲಿ ಕಳೆಯುವ ಶ್ರೀಗಳಿಗೆ ಮೂಕ ಪ್ರಾಣಿಗಳ ಮೇಲೂ ಹೆಚ್ಚಿನ ಕರುಣೆ.  ಮಠದ ಸಮೀಪದ ಬಾವಿಯೊಂದಕ್ಕೆ ಬೆಕ್ಕಿನ ಮರಿ ಬಿದ್ದಿತ್ರು. ಪ್ರಾಣಸಂಕಟದಲ್ಲಿದ್ದ ಮರಿಯ ಮೂಕ ವೇದನೆಯನ್ನು…

ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ; ನಾಗರಿಕರು ಗಮನಿಸಬೇಕಾದ ಸಂಗತಿಗಳು ಇವು..

ಬೆಂಗಳೂರು: ರಾಜ್ಯದ ಪ್ರತಿ ಮನೆಗಳಿಗೆ ಉಚಿತ ವಿದ್ಯುತ್ ಪೂರೈಸುವ ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮೊಬೈಲ್‌, ಕಂಪ್ಯೂಟರ್, ಲ್ಯಾಪ್‌ಟಾಪ್‌ಗಳಲ್ಲಿ ಅರ್ಜಿ ಹಾಕಬಹುದು. ಆಧಾರ್‌ ಸಂಖ್ಯೆ, ವಿದ್ಯುತ್ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆ ನಮೂದಿಸಬೇಕು. ಗೊಂದಲ ಇದ್ರೆ ಸಹಾಯವಾಣಿ 1912ಗೆ ಕರೆ ಮಾಡಬಹುದು.ವಿದ್ಯುತ್​ಶಕ್ತಿ ಕಚೇರಿಯಲ್ಲೂ ಮಾಹಿತಿ ಪಡೆಯಬಹುದು ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಬಾಡಿಗೆ ಮನೆಗೆ ಸಂಬಂಧಿಸಿದ ದಾಖಲೆ ಇರಬೇಕು. ಬಾಡಿಗೆ ಮನೆಯಲ್ಲಿ ಇರುವವರು ಉಚಿತ ವಿದ್ಯುತ್‌ಗಾಗಿ ಅಗತ್ಯ ದಾಖಲೆ ಸಲ್ಲಿಸಬೇಕು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲೂ ನೋಂದಾಯಿಸಬಹುದು.

ಅನ್ನಭಾಗ್ಯಕ್ಕಾಗಿ ಅಕ್ಕಿ ಹುಡುಕಾಟ; ಛತ್ತೀಸ್‌ಗಡದಲ್ಲಿ1.5 ಲಕ್ಷ ಮೆ.ಟನ್ ಲಭ್ಯ 

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ‌ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ, ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.

ಕೇಂದ್ರ ನೀಡದಿದ್ದರೂ ರಾಜ್ಯ ಸರ್ಕಾರವೇ 10 ಕೆ.ಜಿ ಅನ್ನಭಾಗ್ಯ ಅಕ್ಕಿ ನೀಡಲಿದೆಯಂತೆ

ಕೇಂದ್ರ ಸರಕಾರ ನೀಡದಿದ್ದರೂ ನಾವು 10 ಕೆ.ಜಿ ಅಕ್ಕಿ ನೀಡುತ್ತೇವೆ. ಅನ್ನ ಭಾಗ್ಯ ಯೋಜನೆ ಜಾರಿ ಆಗಲಿದೆ. ಇದು ಒಕ್ಕೂಟ ವ್ಯವಸ್ಥೆ. ದೇಶದಲ್ಲಿ ಈಗಾಗಲೇ ಇರುವ ವ್ಯವಸ್ಥೆ ಹಾಗೂ ಪ್ರಕ್ರಿಯೆ ಮೂಲಕ ಅಕ್ಕಿ ಖರೀದಿಗೆ ಮನವಿ ಮಾಡಿದ್ದೆವು. ದಾಸ್ತಾನು ಇದ್ದರೂ ಅಕ್ಕಿ ನೀಡಲು ನಿರಾಕರಿಸಿದ್ದಾರೆ. ಕೇಂದ್ರದ ಈ ಧೋರಣೆ ಪ್ರತಿಭಟಿಸಿ, ಜನರಿಗೆ ಅರಿವು… pic.twitter.com/wiNfobBM5i — Karnataka Congress (@INCKarnataka) June 16, 2023