‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ; ಪರಿಷ್ಕೃತ ದರ ಫೆ.9 ರಿಂದ ಜಾರಿಗೆ

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ. 8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿದೆ ಎನ್ನಲಾಗುತ್ತಿದ್ದು, ಪರಿಷ್ಕೃತ ದರ ಫೆ.9 ರಿಂದ ಜಾರಿಗೆ ಬರಲಿದೆ. ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದ್ದು 10 ರೂಪಾಯಿಯಿಂದ 90 ರೂಪಾಯಿ ವರೆಗೆ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದರು.

“ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಮೋದಿ ಸಂದೇಶ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ. ಜನಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದವರು ಹೇಳಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿರುವ ಮೋದಿ, ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ ಎಂದಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದವರು ಭರವಸೆ ನೀಡಿದ್ದಾರೆ. Jana Shakti is paramount! Development wins, good governance…

ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್​, ಆದರೆ ಪ್ರಕರಣ ರದ್ದು ಇಲ್ಲ

ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಗ್ಗೆ ಪೋಕ್ಸೋ ಆರೋಪ ಬಾಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಗಂಭೀರತೆ ಅರಿತ ಸರ್ಕಾರ ಈ ತನಿಖೆಯನ್ನು ಸಿಐಡಿಗೆ ವರ್ಗಾಸಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಹೇಳಿಕೆಗಳನ್ನು ದಾಖಲಿಸಿತ್ತು. ಈ ನಡುವೆ, ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಇದೀಗ ಧಾರವಾಡ ಹೈಕೋರ್ಟ್​ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿತು. ಕೇವಲ…

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿದ್ದಾರೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿರುವ ಸಿಎಂ ಯೋಗಿ, ಮಹಾಕುಂಭ ಪ್ರತಿನಿಧಿಸುವ ನಂಬಿಕೆ ಮತ್ತು ಆಧುನಿಕತೆಯ ಸಂಗಮ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ‘ಪೌಷ ಪೂರ್ಣಿಮೆಯ ಶುಭಾಶಯಗಳು. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗುತ್ತಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಎಲ್ಲಾ ಪೂಜ್ಯ ಸಂತರು, ಕಲ್ಪವಾಸಿಗಳು ಮತ್ತು ಭಕ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಗಂಗಾ ಮಾತೆ ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಲಿ’ ಎಂದಿದ್ದಾರೆ. ‘ಸನಾತನ…

ರಾಜ್ಯದಲ್ಲಿ HSRP ಅಕ್ರಮಕ್ಕೆ ಅವಕಾಶ ಇಲ್ಲ; ಕೇಂದ್ರ ಮಾರ್ಗಸೂಚಿ ಮೀರಲ್ಲ; ರಾಮಲಿಂಗ ರೆಡ್ಡಿ ನಿರ್ಧಾರಕ್ಕೆ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು…

ಅಕ್ಕಿ ಜಟಾಪಟಿ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…

ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌

ಬೆಂಗಳೂರು: ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌ ಹೊರಡಿಸಿದೆ. ಯಾವ ತರಗತಿಯ ಮಕ್ಕಳಿಗೆ ಎಷ್ಟು ತೂಕದ ಚೀಲದ ಹೊರೆ ಇರಬೇಕೆಂಬ ಬಗ್ಗೆ ಸುತ್ತೋಲೆಯಲ್ಲಿ ಹೇಳಲಾಗಿದೆ. ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ಹೊರಬಹುದು ಎಂಬ ಮೂಳೆ ತಜ್ಞರ ಶಿಫಾಸು ಆಧರಿಸಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಬಗ್ಗೆ ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಸೂಕ್ತ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ಚೀಲದ ತೂಕ ಇಷ್ಟೇ ಇರಬೇಕು: 1ರಿಂದ 2ನೇ ತರಗತಿ ವರೆಗಿನ ಮಕ್ಕಳಿಗೆ 1.5 ರಿಂದ 2 ಕಿಲೋ 3ರಿಂದ 5ನೇ ತರಗತಿ…

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಜೂ.​​22 ರಂದು ಕರ್ನಾಟಕ ಬಂದ್​​ಗೆ ಕರೆ

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಆರಂಭಿಕ ಆಘಾತವಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕೈಗಾರಿಕೋದ್ಯಮಿಗಳು ಕರ್ನಾಟಕ ಬಂದ್ ಕರೆ ನೀಡುವ ಮೂಲಕ‌ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೈಗಾರಿಕೋದ್ಯಮಿಗಳು,  ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಕೆಸಿಸಿಐ ಒಂದು ವಾರಗಳ ಗಡುವು ವಿಧಿಸಿತ್ತು. ದರ ಏರಿಕೆ ಆದೇಶವನ್ನು ಹಿಂಪಡೆಯದಿದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು. ಈ ಎಚ್ಚರಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯ ಬಂದ್‌ಗೆ…

ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ?

ಹಾವೇರಿ : ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ದರ ಕಟ್ಟಲಿಲ್ಲಾ ಎಂದರೆ ಕರೆಂಟ್ ಸಪ್ಲೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೂ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದರು. ಜನಗಳಿಗೆ ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಬೋರ್ ವೆಲ್ ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೆ ಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಆಹಾಕಾರ ಆಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ…

ಗ್ಯಾರೆಂಟಿ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಸಲಹೆ

ಹಾವೇರಿ : ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ‌ ಎಂದರು. ಒಂದು ಗ್ರಾಮಕ್ಕೆ ಕುಡಿಯುವ ನೀರು ಆರೋಗ್ಯದ ಜೊತೆಗೆ ಶಾಲಾ ಕೊಠಡಿಗಳು ಮುಖ್ಯವಾಗಿದೆ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆ ಅಡಿಯಲ್ಲಿ ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ ಎಂದರು. ರೈತನ…