ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ. 8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿದೆ ಎನ್ನಲಾಗುತ್ತಿದ್ದು, ಪರಿಷ್ಕೃತ ದರ ಫೆ.9 ರಿಂದ ಜಾರಿಗೆ ಬರಲಿದೆ. ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದ್ದು 10 ರೂಪಾಯಿಯಿಂದ 90 ರೂಪಾಯಿ ವರೆಗೆ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದರು.
Tag: navakarnataka publication
“ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಮೋದಿ ಸಂದೇಶ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ. ಜನಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದವರು ಹೇಳಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿರುವ ಮೋದಿ, ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ ಎಂದಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದವರು ಭರವಸೆ ನೀಡಿದ್ದಾರೆ. Jana Shakti is paramount! Development wins, good governance…
ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್, ಆದರೆ ಪ್ರಕರಣ ರದ್ದು ಇಲ್ಲ
ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಗ್ಗೆ ಪೋಕ್ಸೋ ಆರೋಪ ಬಾಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಗಂಭೀರತೆ ಅರಿತ ಸರ್ಕಾರ ಈ ತನಿಖೆಯನ್ನು ಸಿಐಡಿಗೆ ವರ್ಗಾಸಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಹೇಳಿಕೆಗಳನ್ನು ದಾಖಲಿಸಿತ್ತು. ಈ ನಡುವೆ, ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿತು. ಕೇವಲ…
MCC ಹಗರಣ: 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ಸರ್ಕಾರದಿಂದ ಪರಿಶೀಲನೆ ಬಿರುಸು
ಬೆಂಗಳೂರು: ಎಂಸಿಸಿ ಬ್ಯಾಂಕ್ ಹಗರಣಕ್ಕೆ ರೋಚಕ ತಿರುವು ಸಿಕ್ಕಿದೆ. ಹಲವಾರು ಅಕ್ರಮ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಅಕ್ರಮಗಳಿಂದ ರೋಸಿಹೋದ ಸದಸ್ಯರೊಬ್ಬರು ಸಾವಿಗೆ ಶರಣಾದ ಪ್ರಕರಣ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಸೂಪರ್‌ಸೀಡ್ ಮಾಡಬೇಕೆಂಬ ಆಗ್ರಹ ಹೆಚ್ಚಾಗಿದೆ. ಈ ಕುರಿತಂತೆ ಎಂಸಿಸಿ ಬ್ಯಾಂಕಿನ ಸುಮಾರು 33 ಸದಸ್ಯರು ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಕಾರ್ಯದರ್ಶಿ ಸಹಿತ ಸರ್ಕಾರದ ಪ್ರಮುಖರಿಗೆ ದೂರು ಸಲ್ಲಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಎಂಸಿಸಿ ಬ್ಯಾಂಕಿನ ವಿರುದ್ದದ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಹಕಾರ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳ ಪರಿಶೀಲನಾ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆಯ ಅಧಿಕಾರಿಗಳ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಂಗಳೂರು ಕೆಥೋಲಿಕ್ ಸಹಕಾರ ಬ್ಯಾಂಕ್ (MCC Bank) ಬಹುಕೋಟಿ ರೂಪಾಯಿ ಅವ್ಯವಹಾರ ಆರೋಪ ಪ್ರಕರಣಕ್ಕೆ ರೋಚಕ…