ಬೆಂಗಳೂರು: ನೈಸ್ ಯೋಜನೆ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಿರುವ 11,000 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರಕಾರ ವಾಪಸ್ ಪಡೆದು ರೈತರಿಗೆ ಕೊಡಬೇಕು. ಇಲ್ಲವಾದರೆ ಪಶ್ಚಿಮ ಬಂಗಾಳದಲ್ಲಿ ನಡೆದ ಸಿಂಗೂರು ಮಾದರಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಭವನದಲ್ಲಿ ನೈಸ್ ಸಂತ್ರಸ್ತ ರೈತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ್ಯ ರೈತರ ಸಂಘ ಹಮ್ಮಿಕೊಂಡಿದ್ದ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ನೈಸ್ ಭೂಮಿ ಕಳೆದುಕೊಂಡಿರುವ ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ಹೋರಾಟ ಪಕ್ಷಾತೀತ, ರಾಜಕೀಯಕ್ಕೆ ಅತೀತವಾಗಿ ನಡೆಯಬೇಕು. ಸರ್ಕಾರ ಭೂಮಿಯನ್ನು ವಾಪಸ್ ಕೊಡದಿದ್ದರೆ ಸಿಂಗೂರು ಮಾದರಿ ಹೋರಾಟ ಆರಂಭ ಮಾಡೋಣ. ಯೋಜನೆಯನ್ನು ಕೈಗೆತ್ತಿಕೊಳ್ಳದಿದ್ದರೆ ಭೂಮಿಯನ್ನು ರೈತರಿಗೆ ವಾಪಸ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರ 5000 ಎಕರೆ…