ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್ಡಿಎ ಮಿತ್ರ ಪಕ್ಷಗಳು ಈ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿ ಎರ್ಪಟ್ಟಿದ್ದು ಕದನ ಕೌತುಕ ಸೃಷ್ಟಿಸಿದೆ. ಈ ನಡುವೆ ಎಚ್.ಡಿ.ಕುಮಾರಸ್ವಾಮಿ ಕುಟುಂಬ ತಮ್ಮ ಪುತ್ರನ ಗೆಲುವಿಗಾಗಿ ಟೆಂಪಲ್ ರನ್ ಕೈಗೊಂಡಿದ್ದು, ಪೂಜೆಯ ವೇಳೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ. ದೇವರ ವಿಗ್ರಹದ ಬಲಗಡೆಯಿಂದ ಹೂವು ಬಿದ್ದಿದ್ದು, ಈ ಬಗ್ಗೆ ಬಗೆಬಗೆಯ ಚರ್ಚೆ ಶುರುವಾಗಿದೆ. ಕುಮಾರಸ್ವಾಮಿಯವರು ಭಾನುವಾರ ಪತ್ನಿ ಅನಿತಾ ಹಾಗೂ ಸೊಸೆ, ಮೊಮ್ಮಗು ಜೊತೆಗೆ ಹಾಸನಾಂಬೆ ಜಾತ್ರೆಯಲ್ಲಿ ಭಾಗವಹಿಸಿದರು. ಬಳಿಕ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ನೆರವೇರಿತ್ತಿರುವಾಗಲೇ ವಿಗ್ರಹದ ಬಲಗಡೆಯಿಂದ ಹೂ…
Tag: Nikhil Kumaraswamy
ಚನ್ನಪಟ್ಟಣ ಉಪಚುನಾವಣೆ: ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಘೋಷಣೆ ಮಾಡಿದರು.