ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ…